TooBrief TooBrief

Home / Headlines

ಬಿಗ್ ಬಾಸ್ ಕನ್ನಡ ಸೀಸನ್ 13: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ

TV9 Kannada · DistrictNews · 2026-09-27

ಬಿಗ್ ಬಾಸ್ ಕನ್ನಡ ಸೀಸನ್ 13: ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳಿಗೆ ಸುದೀಪ್ ಸ್ವಾಗತ

‘ಬಿಗ್ ಬಾಸ್ ಕನ್ನಡ ಸೀಸನ್ 13’ ರಿಯಾಲಿಟಿ ಶೋನಲ್ಲಿ ಮೂವರು ಹೊಸ ಸ್ಪರ್ಧಿಗಳ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಈ ಸ್ಪರ್ಧಿಗಳು ಬಂದಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಅವರು ಸ್ವಾಗತ ಕೋರಿದ್ದಾರೆ. ಭಾನುವಾರದ (ಸೆಪ್ಟೆಂಬರ್ 27) ಸಂಚಿಕೆಯ ಪ್ರೋಮೋವನ್ನು ‘ಕಲರ್ಸ್ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಆ ಮೂವರು ಸ್ಪರ್ಧಿಗಳು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಸಂಜೆ ಪ್ರಸಾರ ಆಗುವ ಸಂಚಿಕೆಯಲ್ಲಿ ವೈಲ್ಡ್ ಕಾರ್ಡ್ ಸ್ಪರ್ಧಿಗಳ ಬಗ್ಗೆ ಮಾಹಿತಿ ತಿಳಿಯಲಿದೆ. ಒಟ್ಟಿನಲ್ಲಿ ಈ ಸೀಸನ್​ಗೆ ಹೊಸ ಹುರುಪು ನೀಡಲು ಹೊಸ ಸ್ಪರ್ಧಿಗಳನ್ನು ಕರೆತರಲಾಗಿದೆ. ಅವರ ಎಂಟ್ರಿಯಿಂದಾಗಿ ಮನೆಯೊಳಗಿನ ಸ್ಪರ್ಧಿಗಳಿಗೆ ಅಚ್ಚರಿ ಆಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Read original on TV9 Kannada Get the app

Licensed summary · LicensedSummary

Related briefs