TooBrief TooBrief

Home / Headlines

ಕಣಕ್ಕಿಳಿಯದೇ ಸೆಮಿಫೈನಲ್​ಗೆ ಪ್ರವೇಶಿಸಿದ ಟೀಮ್ ಇಂಡಿಯಾ

TV9 Kannada · DistrictNews · 2026-09-28

ಕಣಕ್ಕಿಳಿಯದೇ ಸೆಮಿಫೈನಲ್​ಗೆ ಪ್ರವೇಶಿಸಿದ ಟೀಮ್ ಇಂಡಿಯಾ

ಜಪಾನ್‌ನ ನಿಶ್ಶಿನ್ ಕೊರೋಗಿ ಸ್ಪೋರ್ಟ್ಸ್ ಪಾರ್ಕ್ ಮೈದಾನದಲ್ಲಿ ನಡೆಯಬೇಕಿದ್ದ ಏಷ್ಯನ್ ಗೇಮ್ಸ್ 2026ರ ಪುರುಷರ ಟಿ20 ಟೂರ್ನಿಯ ದ್ವಿತೀಯ ಕ್ವಾರ್ಟರ್ ಫೈನಲ್ ಪಂದ್ಯವು ಮಳೆಯಿಂದಾಗಿ ಸಂಪೂರ್ಣ ರದ್ದಾಗಿದೆ. ಈ ಪಂದ್ಯದಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ್ ಮುಖಾಮುಖಿಯಾಗಬೇಕಿತ್ತು. ಪಂದ್ಯ ರದ್ದಾದ ಕಾರಣ, ಐಸಿಸಿ ಟಿ20 ರ‍್ಯಾಂಕಿಂಗ್‌ನಲ್ಲಿ ಮೇಲಿರುವ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಇದಕ್ಕೂ ಮುನ್ನ ಪಾಕಿಸ್ತಾನ್ ಮತ್ತು ಹಾಂಗ್ ಕಾಂಗ್ ನಡುವಣ ಮೊದಲ ಕ್ವಾರ್ಟರ್ ಫೈನಲ್ ಪಂದ್ಯ ಕೂಡ ಮಳೆಯ ಕಾರಣ ರದ್ದಾಗಿತ್ತು. ಅದರಂತೆ ಐಸಿಸಿ ರ‍್ಯಾಂಕಿಂಗ್‌ ಆಧಾರದ ಮೇಲೆ ಪಾಕಿಸ್ತಾನ್ ತಂಡ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇದೀಗ ಟೀಮ್ ಇಂಡಿಯಾ ಕೂಡ ಮುಂದಿನ ಸುತ್ತಿಗೆ ಪ್ರವೇಶಿಸಿದೆ.

Read original on TV9 Kannada Get the app

Licensed summary · LicensedSummary

Related briefs