TooBrief TooBrief

Home / Headlines

ಬೆಂಗಳೂರು: ಕಗ್ಗದಾಸಪುರದಲ್ಲಿ 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ

TV9 Kannada · DistrictNews · 2026-09-30

ಬೆಂಗಳೂರು: ಕಗ್ಗದಾಸಪುರದಲ್ಲಿ 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ

ಬೆಂಗಳೂರು, ಸೆಪ್ಟೆಂಬರ್ 30 : ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ರೀಫಿಲ್ಲಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ಸರಣಿಯಾಗಿ ನಾಲ್ಕು ಎಲ್‌ಪಿಜಿ ಸಿಲಿಂಡರ್‌ಗಳು ಸ್ಫೋಟಗೊಂಡಿವೆ. ಸ್ಫೋಟದ ತೀವ್ರತೆಗೆ ಒಂದು ಸಿಲಿಂಡರ್ ಹಾರಿ ಸಮೀಪದ ಶಾಲೆಯ ಕಿಟಕಿಗೆ ಅಪ್ಪಳಿಸಿದೆ. ಈ ಘಟನೆ ಅಟಲ್ ಬಿಹಾರಿ ವಾಜಪೇಯಿ ಪಾರ್ಕ್ ಬಳಿ, ಕಗ್ಗದಾಸಪುರದಲ್ಲಿ ಸಂಭವಿಸಿದೆ. ಸ್ಫೋಟದ ತಕ್ಷಣವೇ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿತ್ತು. ಘಟನೆಯ ಬಗ್ಗೆ ಮಾಹಿತಿ ಲಭಿಸುತ್ತಿದ್ದಂತೆ, ಅಗ್ನಿಶಾಮಕ ದಳದವರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ, ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಅದೃಷ್ಟವಶಾತ್, ಈ ದುರ್ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅಥವಾ ಗಂಭೀರ ಗಾಯಗಳಾಗಿಲ್ಲ.

Read original on TV9 Kannada Get the app

Licensed summary · LicensedSummary

Related briefs